ಅನಧಿಕೃತ ಅಂಗಡಿಗಳು ಮತ್ತು ಪ್ಲೆಕ್ಸ್ ಗಳನ್ನು ತೆರವುಗೊಳಿಸಿದ ಬಿಬಿಎಂಪಿ

ಬೆಂಗಳೂರು,ಜ.4-ನಗರದ ನಂದಿನಿ ಲೇಔಟ್‍ನ ಫುಟ್‍ಪಾತ್‍ನಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟುಮಾಡುತ್ತಿದ್ದ ಅನಧಿಕೃತ ಅಂಗಡಿಗಳು, ಫ್ಲೆಕ್ಸ್‍ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ.

ಇಂದು ಬೆಳಗ್ಗೆ 9 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿರುವ ಬಿಬಿಎಂಪಿ 200 ಅಂಗಡಿಗಳ ಮುಂದೆ ಹಾಕಲಾಗಿದ್ದ ಫ್ಲೆಕ್ಸ್‍ಗಳನ್ನು ತೆರವುಗೊಳಿಸಿದ್ದಾರೆ.
ನಂದಿನಿ ಲೇಔಟ್‍ನ ಕಂಠೀರವ ನಗರದ ಮೊದಲನೇ ಬ್ಲಾಕ್‍ನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪೆÇಲೀಸರ ಸಹಾಯದೊಂದಿಗೆ ಬಿಬಿಎಂಪಿ ಅಧಿಕಾರಿಗಳು ತೆರವು ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ