ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಾಕೇನ್ ರಾಜೀನಾಮೆ ನೀಡಿದ್ದಾರೆ. ಮಾಕೇನ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಜಯ್ ಮಾಕೇನ್ ರಾಜೀನಾಮೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಂಗಿಕರಿಸಿದ್ದಾರೆ ಎನ್ನಲಾಗಿದೆ.
ಅಜಯ್ ಮಾಕೇನ್ ಕಳೆದ ನಾಲ್ಕು ವರ್ಷದಿಂದ ದೆಹಲಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜೀನಾಮೆ ಸಲ್ಲಿಸುವಾಗ ಅನಾರೋಗ್ಯದ ಕಾರಣ ನೀಡಿದ್ದರು ಎನ್ನಲಾಗಿದೆ. ಆದರೆ ಇನ್ನೂ ಕೆಲ ಮೂಲಗಳ ಪ್ರಕಾರ, ಅಜಯ್ ಮಕೇನ್ ಅವರಿಗೆ ರಾಷ್ಟ್ರ ಮಟ್ಟದ ಹುದ್ದೆ ಅಥವಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಲಿರುವುದರಿಂದ ದೆಹಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಮಾಕೇನ್ ಟ್ವೀಟ್ನಲ್ಲಿ ರಾಜೀನಾಮೆ ಘೋಷಿಸುವ ಮೊದಲು ಗುರುವಾರ ರಾತ್ರಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ನಂತರ ಮಾಡಿರುವ ಟ್ವೀಟ್ನಲ್ಲಿ, “2015ರ ಲೋಕಸಭೆ ಚುನಾವಣೆ ನಂತರ ಅಂದರೆ ನಾಲ್ಕು ವರ್ಷಗಳ ಹಿಂದೆ ದೆಹಲಿ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾಗ ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಾಧ್ಯಮದಿಂದ ಪ್ರೀತಿ ಮತ್ತು ಉತ್ತಮ ಬೆಂಬಲ ದೊರೆತಿದೆ. ಕಷ್ಟಕರ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವುದು ಸುಲಭದ ಮಾತಾಗಿರಲಿಲ್ಲ. ನಾನು ಎಲ್ಲರಿಗೂ ಋಣಿಯಾಗಿದ್ದೇನೆ ಎಂದಿದ್ದಾರೆ.
ಮೂರು ತಿಂಗಳ ಹಿಂದೆ ಮಾಕೇನ್ ಚಿಕಿತ್ಸೆಗಾಗಿ ವಿದೇಶಕ್ಕೆ ಹೋದಾಗ ಹಂಗಾಮಿ ಅಧ್ಯಕ್ಷರಾಗಿ ಪಿ.ಸಿ.ಚಾಕೊ ಕಾರ್ಯ ನಿರ್ವಹಿಸಿದ್ದರು. ಆ ಸಂದರ್ಭದಲ್ಲಿ ಮಾಕೇನ್ ತಾತ್ಕಾಲಿಕವಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.
Ajay Maken, Resigns As Delhi Congress Chief, May Get New Central Role