ತಿರುವನಂತಪುರಂ: ಶಬರಿಮಲೆಯ ದೇವಾಲಯಕ್ಕೆ ಭೇಟಿ ನೀಡಿದ್ದ ಶ್ರೀಲಂಕಾದ ಮಹಿಳೆ ಶಶಿಕಲಾ, ದೇಗುಲ ಪ್ರವೇಶಿಲು ನನಗೆ ಅವಕಾಶವನ್ನೇ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಂಪಾ ಬಳಿ ಮಾತನಾಡಿರುವ ಶಶಿಕಲಾ, ನನಗೆ ದೇಗುವ ಪ್ರವೇಶಿಸಲು ಪೊಲೀಸರು ಬಿಡಲಿಲ್ಲ. ಪೊಲೀಸರು ನನ್ನನ್ನು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ. ನಾನು ಅಯ್ಯಪ್ಪನ ನಿಜವಾದ ಭಕ್ತೆ. 48 ದಿನ ಮಾಲೆ ಧರಿಸಿ ದೇವರನ್ನು ಆರಾಧಿಸಿದ್ದೇನೆ. ನಾನು ಯಾರಿಗೂ ಭಯಪಡಲಾರೆ. ಅವರೇಕೆ ನನ್ನನ್ನು ತಡೆಯಬೇಕು. ನನ್ನ ಬಳಿ ವೈದ್ಯಕೀಯ ದಾಖಲೆಗಳಿವೆ. 48 ವರ್ಷ ಪೂರೈಸಿರುವ ನನ್ನ ಗರ್ಭಕೋಶವನ್ನು ಕಾರಣಾಂತರಗಳಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆದು ಹಾಕಲಾಗಿದೆ. ಈ ಬಗ್ಗೆ ನಾನು ವೈದ್ಯಕೀಯ ದಾಖಲೆ ಹೊಂದಿದ್ದೇನೆ. ಆದರೂ ನನ್ನನ್ನು ದೇವರ ದರ್ಶನಕ್ಕೆ ಬಿಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಶಶಿಕಲಾ ಪತಿ ಕೂಡ ಪ್ರತಿಕ್ರಿಯೆ ನೀಡಿದ್ದು, ದೇಗುಲಕ್ಕೆ ಇನ್ನು ಒಂದು ಕಿಲೋಮೀಟರ್ ಇರುವಾಗಲೇ ಮರಕೂಟಮ್ ಎಂಬಲ್ಲಿ ನಮ್ಮನ್ನು ತಡೆಯಲಾಯಿತು. ಹೀಗಾಗಿ ನಾನು ನನ್ನ ಮಗ ಮಾತ್ರ ದರ್ಶನ ಪಡೆದೆವು. ಶಶಿಕಲಾ ಹಿಂದಕ್ಕೆ ಹೋದರು ಎಂದು ಅವರು ಹೇಳಿದರು.
ಆದರೆ, ಇದಕ್ಕೂ ಮೊದಲು ಮಹಿಳೆ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದ ಬಗ್ಗೆ ಪೊಲೀಸರೇ ಖಚಿತಪಡಿಸಿದ್ದರು. ಆದರೆ, ಮಹಿಳೆ ಅದನ್ನು ನಿರಾಕರಿಸಿದ್ದಾರೆ. ಈ ನಡೆ ಈಗ ಹಲವು ಅನುಮಾನಗಳಿಗೆ ಕಾರಣವಾಗಿವೆ.
Sri Lankan women refutes, says was not allowed to enter the Sabarimala temple