
ಯಶವಂತಪುರ, ಜ.4- ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಆ ಸಮುದಾಯದ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಸೂಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಬಸ್ತಿ ಹಾಗೂ ಚಿಕ್ಕಬಸ್ತಿ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಹಾಗೂ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಕಲ್ಯಾಣ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಆ ಸಮುದಾಯದ ಜೀವನಮಟ್ಟ ಸುಧಾರಣೆ ಹಾಗೂ ಸರ್ವತೋಮುಖ ಪ್ರಗತಿಗೆ ದುಡಿಯುವುದಾಗಿ ತಿಳಿಸಿದರು.
ಜಿ.ಪಂ.ಸದಸ್ಯೆ ಲತಾ ಹನುಮಂತೇಗೌಡ, ತಾಪಂ ಸದಸ್ಯೆ ಶೋಭಾ ತಿಮ್ಮೇಗೌಡ, ಮುಖಂಡರಾದ ವೆಂಕಟರಮಣ, ಸಬಿಹಾ, ನಫೀಜಾ, ಸಿರಾಜï , ಎಜಾಜï ಮೊದಲಾದವರಿದ್ದರು.