ಜ.8 ಮತ್ತು 9ರಂದು ನಡೆಯಲಿರುವ ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ಮುಷ್ಕರದಲ್ಲಿ ಭಾಗವಹಿಸಲು ತೀರ್ಮಾನಿಸಿದ ರಾಜ್ಯ ವರ್ಕರ್ಸ್ ಯೂನಿಯನ್

ಬೆಂಗಳೂರು, ಜ.4-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.8, 9 ರಂದು ನಡೆಯಲಿರುವ ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ಅಖಿಲ ಭಾರತ ಮುಷ್ಕರದಲ್ಲಿ ಕರ್ನಾಟಕ ವರ್ಕರ್ಸ್ ಯೂನಿಯನ್ ಭಾಗವಹಿಸಲು ತೀರ್ಮಾನಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಷ್ಕರದ ಅಂಗವಾಗಿ ಕರ್ನಾಟಕ ವರ್ಕರ್ಸ್ ಯೂನಿಯನ್ ವತಿಯಿಂದ ಬೆಳಗ್ಗೆ 9.30ಕ್ಕೆ ಮೆರವಣಿಗೆಯು ಮಿನರ್ವ ವೃತ್ತದಿಂದ ಆರಂಭವಾಗಿ ಜೆ.ಸಿ.ರಸ್ತೆ ಮೂಲಕ ಹಾದು ಟೌನ್‍ಹಾಲ್‍ವರೆಗೆ ಸಾಗಿ ಅಲ್ಲಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ತೆರಳಲಿದೆ ಎಂದರು.

ಮೆರವಣಿಗೆಯಲ್ಲಿ ಬೆಂಗಳೂರಿನ ಪೀಣ್ಯ ರಾಜಾಜಿನಗರ, ನೆಲಮಂಗಲ, ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದರು.

ಮುಷ್ಕರದಲ್ಲಿ ಗುತ್ತಿಗೆ ಕಾರ್ಮಿಕರ ಪದ್ಧತಿಯನ್ನು ರದ್ದುಮಾಡಬೇಕು, ಎಲ್ಲಾ ಕಾರ್ಮಿಕರಿಗೂ ಕನಿಷ್ಠ ವೇತನ 18 ಸಾವಿರ ನಿಗದಿಪಡಿಸಬೇಕು.ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ