ವಿಶ್ವಸಂಸ್ಥೆ, ಜ.5-ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿಚಾರದಲ್ಲಿ ಕೇರಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆ ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ವಿಷಯದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದೆ. ಕಾನೂನು ಎಲ್ಲರಿಗೂ ಒಂದೇ. ಕಾನೂನು ದೃಷ್ಟಿಯಲ್ಲಿ ಎಲ್ಲರೂ ಸರಿಸಮಾನರು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಕಾನೂನುನ್ನು ಎಲ್ಲರೂ ಗೌರಿಸಬೇಕು ಮತ್ತು ಪಾಲಿಸಬೇಕೆಂದು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್ ಹೇಳಿದ್ದಾರೆ.
ವಿಶ್ವಸಂಸ್ಥೆ ಮುಖ್ಯಸ್ಥರ ಉಪ ವಕ್ತಾರರಾದ ಫರಾ ಹಕ್ ಸುದ್ದಿಗಾರರೊಂದಿಗೆ ಮಾತನಾಡಿ ಗುಟೆರಸ್ ಅವರ ಹೇಳಿಕೆಯನ್ನು ತಿಳಿಸಿದ್ದಾರೆ.