ಕೇರಳದಲ್ಲಿ ಹಿಂಸಾಚಾರ: ವರದಿ ಕೇಳಿದ ಕೇಂದ್ರ ಸರ್ಕಾರ

ಹೊಸದಿಲ್ಲಿ/ತಿರುವನಂತಪುರ: ಕೇರಳದಲ್ಲಿ ನಡೆದ ಹಿಂಸಾಚಾರದ ಬಗ್ಗೆ  ವರದಿ ನೀಡುವಂತೆ ಕೇಂದ್ರ ಸರ್ಕಾರ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರಕ್ಕೆ ಕೇಳಿದೆ.

ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ನಡೆದ ಪ್ರತಿ‘ಟನೆ ವೇಳೆ ಕೇರಳದ ಕಣ್ಣೂರು ಮತ್ತು ಇತರೆ ಜಿಲ್ಲೆಗಳಲ್ಲಿ ಹಿಂಸಾಚಾರ ಸಂ‘ವಿಸಿತ್ತುಘಿ. ಸಿಪಿಎಂ ಮತ್ತು ಬಿಜೆಪಿಯ ಹಲವು ನಾಯಕ ಮನೆಗಳ ಮೇಲೆ ದಾಳಿ ನಡೆದಿತ್ತು. ಈ ಸಂಬಂಧ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಕೇರಳ ಸರ್ಕಾರಕ್ಕೆ ಕೇಳಿದೆ. ಆದರೆ ಕೇರಳದಲ್ಲಿ ಪ್ರಸ್ತುತ ಪರಿಸ್ಥಿತಿ ತಿಳಿಗೊಂಡಿದೆ ಎಂದು ಕೇಂದ್ರ ಗೃಹ ಸಚಿವ  ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಆದಾಗ್ಯೂ ಕೇರಳ ರಾಜ್ಯಪಾಲ ಪಿ. ಸದಾಶಿವಂ, ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಶನಿವಾರ ವಿವರಿಸಿದ್ದರು. ಈ ಸಂಬಂ‘ ರಾಜ್ಯಪಾಲರು ಪಿಣರಾಯಿ ಸರ್ಕಾರದಿಂದ ಶುಕ್ರವಾರ ವರದಿ ಪಡೆದಿದ್ದರು.

ಹದಗೆಟ್ಟ ಕಾನೂನು ವ್ಯವಸ್ಥೆ:

ಕೇರಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತುಂಬಾ ಗಾಬರಿಗೊಳ್ಳುವಂತಿದೆ. ಎರಡು ದಿನಗಳ ಹಿಂದೆಯಷ್ಟೇ ಬಿಜೆಪಿ ಸಂಸದ ವಿ. ಮುರಳೀ‘ರನ ಅವರ ಪೂರ್ವಿಕರ  ಮನೆಯ ಮೇಲೆ ದಾಳಿ ನಡೆದಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಏಕ ಪಕ್ಷೀಯ ಹೇಳಿಕೆಗಳಿಂದ ಪರಿಸ್ಥಿತಿ ನಿಯಂತ್ರಣ ಕಳೆದುಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ರಾಥೋಡ್ ಹೇಳಿzರೆ ಎಂದು ಎಎನ್‌ಐ ವರದಿ ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ