ರಾಹುಲ್  ಜನತೆಯ ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿರುವುದು ನಾಚಿಗೇಡಿನ ಸಂಗತಿ: ನಿರ್ಮಲಾ

ಹೊಸದಿಲ್ಲಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಜತೆಗೆ ನಡೆದಿದ್ದ ಒಪ್ಪಂದದ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಯ ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿರುವುದು ನಾಚಿಗೇಡಿನ ಸಂಗತಿ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಎಚ್‌ಎಎಲ್‌ಗೆ ಒಂದು ಲಕ್ಷ ಕೋಟಿ ರೂ.ಮೊತ್ತದ ಗುತ್ತಿಗೆ ನೀಡಿರುವ ಬಗ್ಗೆ ರಕ್ಷಣಾ ಸಚಿವರು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ಸೀತಾರಾಮನ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ. ಇದು ಅತ್ಯಂತ ನಾಚಿಗೇಡಿನ ಸಂಗತಿ ಎಂದು ತಿರುಗೇಟು ನೀಡಿದ್ದಾರೆ. ತಮ್ಮ ಟ್ವೀಟ್ ಜತೆಗೆ ೨೦೧೪ರಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಎಚ್‌ಎಎಲ್‌ಗೆ ನೀಡಿರುವ ಗುತ್ತಿಗೆಯ ವಿವರಣಾತ್ಮಕ ವರದಿಯನ್ನೂ ಪ್ರಕಟಿಸಿದ್ದಾರೆ.

೨೦೧೪ ಮತ್ತು ೨೦೧೮ರ ನಡುವೆ ಎಚ್‌ಎಎಲ್ ೨೬,೫೭೦ ಕೋಟಿ ರೂ. ಹಾಗೂ ೭೩,೦೦೦ ಕೋಟಿ ರೂ. ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದೆ. ಇದಕ್ಕೆ ಸಾಕ್ಷಿ ಈ ವರದಿ. ಸುಳ್ಳು ಮಾಹಿತಿಗಳನ್ನು ನೀಡುತ್ತಾ ಜನರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಸಂಸತ್‌ನಲ್ಲಿ ಕ್ಷಮೆಯಾಚಿಸಲು ಸಿದ್ಧರಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಎಚ್‌ಎಎಲ್‌ಗೆ ಕೇಂದ್ರ ಸರ್ಕಾರ ೧ ಲಕ್ಷ ಕೋಟಿ ರೂ. ಮೊತ್ತದ ಗುತ್ತಿಗೆಯನ್ನು ನೀಡಿದೆ ಎಂದು ಸಂಸತ್‌ನಲ್ಲಿ ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ ತನಗೆ ಒಂದು ಪೈಸೆಯ ಗುತ್ತಿಗೆ ಬಂದಿಲ್ಲ ಎಂದು ಎಚ್‌ಎಎಲ್ ಹೇಳುತ್ತಿದೆ. ಹೀಗಾಗಿ ಅವರು ತಮ್ಮ ಹೇಳಿಕೆಗೆ ಪೂರಕವಾದ ದಾಖಲೆಗಳನ್ನು ಸಲ್ಲಿಸಲೇಬೇಕು ಇಲ್ಲವೇ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ರಾಹುಲ್ ‘ನುವಾರ ಟ್ವೀಟ್ ಮಾಡಿದ್ದರು

೨ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲಘಿ:ರಾಹುಲ್

ಸಂಸತ್ತಿನಲ್ಲಿ ೨ ಗಂಟೆಗಳ ಕಾಲ ಮಾತನಾಡಿದ ರPಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನಾನು ಕೇಳಿದ್ದ ೨ ಸರಳ ಪ್ರಶ್ನೆಗಳಿಗೆ ಉತ್ತರ ನೀಡಲೇ ಇಲ್ಲ ಎಂದು ರಾಹುಲ್ ಗಾಂಯವರು ಟ್ವೀಟ್ ಮಾಡಿದ್ದಾರೆ.

ರಾಲ್ ಒಪ್ಪಂದ ಕುರಿತು ರಕ್ಷಣಾ ಸಚಿವರು ಸ್ಪಷ್ಟನೆ ನೀಡಿದ್ದರು. ಆದರೆ, ಇಡೀ ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳುತ್ತಿರುವ ೨ ಸರಳ ಪ್ರಶ್ನೆಗಳಿಗೆ ಮಾತ್ರ ಅವರು ಉತ್ತರಿಸಲೇ ಇಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ