ಬೆಂಗಳೂರು,ಜ.6- ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಂದರ್ಶನಕ್ಕೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಮಾಕ್ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಈ ಮಾಕ್ ಸಂದರ್ಶನ ಬೆಂಗಳೂರು ನಗರದ ಗಾಂಧೀನಗರದಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪವಿರುವ ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ಅವರ ಕಚೇರಿಯಲ್ಲಿ ಜ.20ರಂದು ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿಯಲ್ಲಿ ನಡೆಸುವ ಸಂದರ್ಶನಕ್ಕೆ ಹಾಜರಾಗಲಿರುವ ಅರ್ಹ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲು ಈ ಮಾಕ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಸಂದರ್ಶನಕ್ಕೆ ಬರುವ ಅರ್ಹ ಅಭ್ಯರ್ಥಿಗಳಿಗೆ ಟಿಎ, ಡಿಎ ಭತ್ಯೆಗಳನ್ನು ನೀಡಲಾಗುವುದು ಹಾಗೂ ಕೇಂದ್ರ ಲೋಕಸೇವಾ ಆಯೋಗ ಫೆಬ್ರವರಿಯಲ್ಲಿ ನಡೆಸುವ ಸಂದರ್ಶನಕ್ಕೆ ಹಾಜರಾಗುವ ಅರ್ಹ ಅಭ್ಯರ್ಥಿಗಳನ್ನು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು.
ಈ ಮಾಕ್ ಸಂದರ್ಶನದಲ್ಲಿ ಹಲವಾರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಐಎಎಸ್, ಐಪಿಎಸ್ ಅಧಿಕಾರಿಗಳು ಇರಲಿದ್ದಾರೆ.
ಸಂದರ್ಶನಕ್ಕೆ ಬರಲಿಚ್ಚಿಸುವ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ರವಿ ಡಿ.ಚೆನ್ನಣ್ಣನವರ್ ಫ್ಯಾನ್ಸ್ ಪೇಜ್ ಸಂಪರ್ಕಿಸಿ.