ಪುಟ್ಟರಂಗ ಶೆಟ್ಟಿ ಪ್ರಕರಣದ ತನಿಖೆ ನಡೆಯುತ್ತಿದೆ, ನಂತರ ಸಿ.ಎಂ. ಸೂಕ್ತ ಕ್ರಮ ವಹಿಸಲಿದ್ದಾರೆ, ಸಚಿವ ಜಿ.ಟಿ.ದೇವೆಗೌಡ

ಬೆಂಗಳೂರು,ಜ.6-ವಿಧಾನಸೌಧದಲ್ಲಿ ಏನು ನಡೆಯುತ್ತಿದೆ ಎಂಬುದು ಬಿಜೆಪಿ ಸೇರಿದಂತೆ ಎಲ್ಲರಿಗೂ ಗೊತ್ತು. ಆದರೆ ಇದಕ್ಕೆ ಮುನ್ನವೇ ಮುಖ್ಯಮಂತ್ರಿ ಧೈರ್ಯವಾಗಿ ಆ ವಿಚಾರ ಪ್ರಸ್ತಾಪ ಮಾಡಿದ್ದರು. ಇಂತಹ ಪ್ರಕರಣ ತಡೆಯಲು ಅವರು ಸೂಕ್ತ ಕ್ರಮಕೈಗೊಳ್ಳುತ್ತಾರೆ  ಎಂದು ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದರು.

ಚಿತ್ರಕಲಾ ಪರಿಷತ್‍ನಲ್ಲಿ ಆರಂಭಗೊಂಡ ಚಿತ್ರಸಂತೆ ಉದ್ಘಾಟನಾ ಕಾರ್ಯಕ್ರಮದಲ್ಲಿ  ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಟ್ಟರಂಗಶೆಟ್ಟಿ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಆ ಪ್ರಕರಣದ ಬಗ್ಗೆ ಹೇಳಿಕೆ ನೀಡಲು ಇಷ್ಟಪಡುವುದಿಲ್ಲ ಹೇಳಿದರು.
ಆದರೆ ಈ ಪ್ರಕರಣದ ತನಿಖೆ ನಡೆಯುತ್ತಿದೆ. ನಂತರ ಸೂಕ್ತ ಕ್ರಮವನ್ನು ಮುಖ್ಯಮಂತ್ರಿ ವಹಿಸಲಿದ್ದಾರೆ ಎಂದರು.

ಈ ಹಿಂದೆಯೇ ವಿಧಾನಸೌಧದಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಧೈರ್ಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರಸ್ತಾಪಿಸಿದರು. ಈಗಾಗಲೇ ಇಂತಹ ಅಕ್ರಮಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಪುಟ್ಟರಂಗಶೆಟ್ಟಿ ಅವರ ಪ್ರಕರಣದ ತನಿಖೆ ನಡೆಯುತ್ತಿದ್ದು, ನಂತರ ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ಪದವಿಯ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹಿಂದಿನ ಸರ್ಕಾರದ ಯೋಜನೆಯಂತೆ  ಲ್ಯಾಪ್‍ಟಾಪ್‍ಗಳನ್ನು ನೀಡಲಿದ್ದೇವೆ. ಆದರೆ ಈ ಕುರಿತಂತೆ ಹೊಸ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಚಿತ್ರಕಲೆ ಸೇರಿದಂತೆ ಸಾಂಸ್ಕøತಿಕ ವಿಚಾರಗಳಲ್ಲಿ ಕುಮಾರಸ್ವಾಮಿ ಅವರು ಹೆಚ್ಚು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾರೆ, ಮುಕ್ತ ಪೆÇ್ರೀ ನೀಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ