ವಕೀಲರ ಸಂಘದ ಸದಸ್ಯೆ ಧರಣಿ ಆತ್ನಹತ್ಯೆಯನ್ನು ಸಿಐಡಿಗೆ ವಹಿಸಲು ಒತ್ತಾಯಿಸಿದ ಅಖಿಲ ಭಾರತ ವಕೀಲರ ಒಕ್ಕೂಟ

ಬೆಂಗಳೂರು,ಜ.7- ಬೆಂಗಳೂರು ವಕೀಲರ ಸಂಘದ ಸದಸ್ಯೆ ಧರಣಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟ ಒತ್ತಾಯಿಸಿದೆ.

ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಮುಖಂಡ ಶಿವಶಂಕರ್ ಮಾತನಾಡಿ, ಧರಣಿ ಅವರು ತಮ್ಮ ಆತ್ಮಹತ್ಯೆಗೆ ಬಿಬಿಎಂಪಿ ಪಾಲಿಕೆ ಸದಸ್ಯರಾದ ಸುರೇಶ್ ಮತ್ತು ಅವರ ಸಹವರ್ತಿಗಳು ನೀಡುತ್ತಿದ್ದ ಕಿರುಕುಳ ಕಾರಣ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಮಹದೇವಪುರದ ಪೆÇಲೀಸ್ ಠಾಣೆಗೆ ದೂರು ನೀಡಿದ್ದರೂ ಇವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರ ಬಗ್ಗೆ ಪ್ರತಿಭಟನೆ ಮಾಡಿದರೂ ಕೂಡ ಆರೋಪಿಗಳನ್ನು ಬಂಧಿಸಲ್ಲ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಬೇಕು. ಒಂದು ವೇಳೆ ಸಿಐಡಿಗೆ ವಹಿಸದಿದ್ದರೆ ಬೃಹತ್‍ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಕೀಲರಾದ ರಾಮಲಿಂಗರೆಡ್ಡಿ, ಮಹದೇವ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ