ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಅಪಾಯವಾಗಿ ಪರಿಣಮಿಸಿದೆ, ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ

ಶಿಲ್ಲಾಂಗ್, ಜ.7 (ಪಿಟಿಐ)- ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಅಪಾಯವಾಗಿ ಪರಿಣಮಿಸಿದೆ. ಪೂರ್ವ ಜೈನ್‍ಟಿಯಾ ಪರ್ವತ ಜಿಲ್ಲೆಯ ಕುಗ್ರಾಮವೊಂದರ ಅನಧಿಕೃತ ಕಲ್ಲಿದ್ದಲು ಗಣಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ.

ಖ್ಲಿಯಾರಿಯಾತ್ ಜಿಲ್ಲಾ ಕೇಂದ್ರದಿಂದ ಜಲ್‍ಯಿಯಾಹ್ ಗ್ರಾಮದ ಕಲ್ಲಿದ್ದಲು ಗಣಿಯಿಂದ ಭಾನುವಾರ ಮುಂಜಾನೆ ಇಬ್ಬರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದೆ.

ಮೇಘಾಲಯದ ಇನ್ನೊಂದು ಅಕ್ರಮ ಕಲ್ಲಿದ್ದಲು ಗಣಿಯೊಳಗೆ ಸಿಲುಕಿರುವ 15 ಕಾರ್ಮಿಕರ ರಕ್ಷಣೆ ಕಾರ್ಯಾಚರಣೆಗೆ ಸಾಗಿದ್ದು, ಅವರ ಬದುಕುಳಿದಿರುವ ಸಾಧ್ಯತೆ ಕ್ಷೀಣಿಸಿದೆ.

ಅಕ್ರಮ ಮತ್ತು ಅಪಾಯಕಾರಿ ಕಲ್ಲಿದ್ದಲು ಗಣಿಗಳು ಮತ್ತು ಕಾನೂನುಬಾಹಿರ ಗಣಿಚಟುವಟಿಕೆಗಳನ್ನು ಹತ್ತಿಕ್ಕಲು ಮೇಘಾಲಯ ಸರ್ಕಾರ ವಿಫಲವಾಗಿರುವುದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‍ಜಿಟಿ) 100 ಕೋಟಿ ರೂ.ಗಳ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಮತ್ತೊಂದು ಗಣಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿರುವುದ ಆತಂಕಕ್ಕೆ ಕಾರಣವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ