ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಬಿಡಿಎ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಹಿನ್ನಲೆ, ಗರಂ ಆಗಿರುವ ಯಶವಂತಪುರ ಕಾಂಗ್ರೇಸ್ ಕಾರ್ಪೋರೇಟರ್ಸ

ಬೆಂಗಳೂರು, ಜ.7-ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೈ ತಪ್ಪಿರುವುದಕ್ಕೆ ಗರಂ ಆಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾಪೆರ್Çೀರೇಟರ್ಸ್, ಜಿ.ಪಂ.ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸಾಮೂಹಿಕ ರಾಜೀನಾಮೆಯ ಬೆದರಿಕೆಯೊಡ್ಡಿದ್ದಾರೆ.

ಈ ಸಂಬಂಧ ಇಂದು ಸಭೆ ನಡೆಸಿ ಎಸ್.ಟಿ.ಸೋಮಶೇಖರ್ ಅವರಿಗೆ ಬಿಡಿಎ ಅಧ್ಯಕ್ಷ ಸ್ಥಾನ ನೀಡಬೇಕು, ಇಲ್ಲದಿದ್ದರೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ.
ಸೋಮಶೇಖರ್ ಅವರ ಆಪ್ತರೂ, ಹೇರೋಹಳ್ಳಿ ವಾರ್ಡ್ ಸದಸ್ಯ ರಾಜಣ್ಣ ನೇತೃತ್ವದಲ್ಲಿ ದೊಡ್ಡ ಬಿದರಕಲ್ಲು ವಾರ್ಡ್‍ನ ವಾಸು, ಹೆಮ್ಮಿಗೆಪುರ ವಾರ್ಡ್ ಸದಸ್ಯ ಆರ್.ಎ.ಶ್ರೀನಿವಾಸ್ ಹಾಗೂ ನಾಲ್ವರು ಜಿ.ಪಂ.ಸದಸ್ಯರು, ಇಬ್ಬರು ಬ್ಲಾಕ್ ಕಾಂಗ್ರೆಸ್ ಸದಸ್ಯರು ಸಭೆ ಸೇರಿ ಎಸ್.ಟಿ.ಸೋಮಶೇಖರ್ ಅವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ ಅವರು, ಸೋಮಶೇಖರ್ ಬಿಡಿಎ ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ. ಹೈಕಮಾಂಡ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ನಾವೆಲ್ಲ ನಮ್ಮ ಶಾಸಕರು ಬಿಡಿಎ ಅಧ್ಯಕ್ಷರಾಗಿ ನೇಮಕವಾಗಲಿದ್ದಾರೆ ಎಂದು ಖುಷಿಪಟ್ಟಿದ್ದೆವು. ಆದರೆ ಈಗ ಅವರ ನೇಮಕಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕದೆ ಅವಮಾನ ಮಾಡಿದ್ದಾರೆ.ಅವರ ಈ ಧೋರಣೆ ಸರಿಯಲ್ಲ ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿದೆ.ಒಟ್ಟಾಗಿ ಅಧಿಕಾರ ಹಂಚಿಕೆ ಮಾಡಿಕೊಳ್ಳಲಾಗಿತ್ತು. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ತೀರ್ಮಾನದಂತೆ ನಿಗಮ ಮಂಡಳಿಗಳ ಅಧ್ಯಕ್ಷರನ್ನು ಘೋಷಿಸಲಾಗಿತ್ತಾದರೂ ಸೋಮಶೇಖರ್ ಅವರಿಗೆ ಸ್ಥಾನ ವಂಚನೆ ಮಾಡಲಾಗಿರುವುದು ಖಂಡನೀಯ. ಅವರನ್ನೂ ಈ ಕೂಡಲೇ ಅಧ್ಯಕ್ಷರನ್ನಾಗಿ ಮಾಡಬೇಕು.ಇಲ್ಲದಿದ್ದರೆ ನಾವೆಲ್ಲ ನಮ್ಮ ಬೆಂಬಲಿಗರೊಂದಿಗೆ ರಾಜೀನಾಮೆ ನೀಡುತ್ತೇವೆ. ಮುಂಬರುವ ಲೋಕಸಭೆ ಚುನಾವಣೆ ಮೇಲೂ ಈ ಅಂಶ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ