ಬೆಂಗಳೂರು, ಜ.7-ನಾಳೆ ಎಡಪಕ್ಷಗಳು ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಧಾನಿ ಬೆಂಗಳೂರಿನಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.
ಕೇಂದ್ರ ಸರ್ಕಾರದ ಜನವಿರೋಧಿ ನೀತಿ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎಡಪಕ್ಷ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿವೆ. ಹಾಗಾಗಿ ಎಲ್ಲೆಡೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ತಿಳಿಸಿದರು.
ನಗರದ ಪ್ರಮುಖ ವೃತ್ತಗಳಲ್ಲಿ ಹೆಚ್ಚಿನ ಪೆÇಲೀಸರನ್ನು ನಿಯೋಜಿಸಲಾಗಿದೆ.
ಬಿಎಂಟಿಸಿ, ಕೆಎಸ್ಆರ್ಟಿಸಿ ನಿಲ್ದಾಣಗಳಲ್ಲಿ ಬಂದೋಬಸ್ತ್ ಹೆಚ್ಚಿಸಲಾಗುವುದು.ಸ್ಥಳೀಯ ಪೆÇಲೀಸರ ಜೊತೆ ಕೆಎಸ್ಆರ್ಪಿ, ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.