ನವದೆಹಲಿ, ಜ.8-ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿ ಅನುಮೋದನೆಗೆ ಕೋರಿದೆ.
ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕಕ್ಕೆ ಸಮ್ಮತಿ ನೀಡಲಾಗಿತ್ತು. ಅದರಂತೆ ಇಂದು ಲೋಕಸಭೆಯಲ್ಲಿ ಈ ಮಸೂದೆ ಮಂಡಿಸಲಾಗಿದೆ.
ಚುನಾವಣಾ ಸ್ಟಂಟ್:
ಈ ಮಸೂದೆ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ , ಇದು ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯ ಎಲೆಕ್ಷನ್ ಸ್ಟಂಟ್ ಮತ್ತು ಪೊಲಿಟಿಕಲ್ ಗಿಮಿಕ್ ಎಂದು ಟೀಕಿಸಿದ್ದಾರೆ.
ಮೇಲ್ಜಾತಿ ವರ್ಗಗಳನ್ನು ಓಲೈಸಲು ಮತ್ತು ಅವರ ಮತ ಬ್ಯಾಂಕ್ಗಳನ್ನು ಸೆಳೆಯಲು ಪ್ರಧಾನಿ ಮೋದಿ ಅನುಸರಿಸಿರುವ ತಂತ್ರ ಇದಾಗಿದೆ ಎಂದು ಅವರು ಆರೋಪಿಸಿದ್ದಾರೆ.