ಬಾರತ್ ಬಂದ ಹಿನ್ನಲೆ ಪರಿಸ್ಥಿತಿಗೆ ಅನುಗುಣವಾಗಿ ಬಸ್ ಸಂಚಾರ ಕ್ರಮ ಕೈಗೊಳ್ಳಲಾಗಿದೆ, ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಜ.8- ಭಾರತ್ ಬಂದ್ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.

ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಸಾರಿಗೆ ಇಲಾಖೆ ಕ್ರಮ ವಹಿಸಿದ್ದು, ಸಾರಿಗೆ ಇಲಾಖೆಯ ನೌಕರರು ಜನರ ಸಮಸ್ಯೆಗಳನ್ನು ಅರಿತಿದ್ದಾರೆ. ಅದಕ್ಕೆ ಸ್ಪಂದಿಸುತ್ತಿದ್ದಾರೆ. ಬಂದ್‍ನಂತಹ ಸಂದರ್ಭದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇಡಬೇಕಾಗುತ್ತದೆ ಎಂದು ಹೇಳಿದರು.

ಮೋಟಾರು ವಾಹನ ಕಾಯ್ದೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರವೇನೂ ಇರುವುದಿಲ್ಲ. ಎಲ್ಲವೂ ಕೇಂದ್ರ ಸರ್ಕಾರದ್ದೇ ಎಂದು ಹೇಳಿದರು.

ಬಸ್‍ಗಳನ್ನು ಜನಸಾಮಾನ್ಯರು ಅವಲಂಬಿಸಿರುತ್ತಾರೆ. ಹಾಗಾಗಿ ಅವರಿಗೆ ತೊಂದರೆಯಾಗಬಾರದು. ಪರಿಸ್ಥಿತಿಯನ್ನು ನೋಡಿಕೊಂಡು ಇಂದು ಮತ್ತು ನಾಳೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲು ಅಧಿಖಾರಿಗಳಿಗೆ ಸೂಚಿಸಲಾಗಿದೆ.

ಕಾರ್ಮಿಕ ನೀತಿ ಸಾರಿಗೆ ಸಂಸ್ಥೆಯ ನೌಕರರಿಗೆ ಮಾತ್ರ ಸಂಬಂಧಿಸಿದ್ದಲ್ಲ. ಇತರ ವಲಯದ ನೌಕರರಿಗೆ ಅನ್ವಯಿಸುವುದರಿಂದ ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ