ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿವರಿಗೆ ಶೇ 10ರಷ್ಟು ಮೀಸಲಾತಿ ಬಗ್ಗೆ ಚಿಂತನೆ, ಸ್ವಾಗತಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ

Deve Gowda

ಬೆಂಗಳೂರು,ಜ.8- ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10% ರಷ್ಟು ಮೀಸಲಾತಿ ನೀಡುವ ಬಗ್ಗೆ ಚಿಂತನೆಗೆ ಮಾಜಿ ಪ್ರಧಾನಿಎಚ್.ಡಿ.ದೇವೇಗೌಡ ಸ್ವಾಗತಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡರು, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಉದ್ಯೋಗ ಮತ್ತು ಶಿಕ್ಷಣಕ್ಕೆ ಮೀಸಲಾತಿ ನೀಡುವ ಎನ್‍ಡಿಎ ಸರ್ಕಾರದ ಚಿಂತನೆಗೆ ನನ್ನ ಸಹಮತವಿದೆ ಎಂದಿದ್ದಾರೆ.

ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಇಂಥದೊಂದು ಮಹತ್ವದ ನಿರ್ಧಾರವನ್ನು ಜೆಡಿಎಸ್ ಪಕ್ಷ ಬೆಂಬಲಿಸಲಿದೆ ಎಂದು ಹೇಳಿದ್ದಾರೆ.

ಸಮಾಜದ ದುರ್ಬಲ ವರ್ಗಗಳ ಸ್ಥಿತಿಯ ಸುಧಾರಣೆಗಾಗಿ ನಾವು ಸದಾ ಬದ್ಧರಾಗಿದ್ದೇವೆ, ಮುಂದೆಯೂ ಇರುತ್ತೇವೆ ಎಂದು ದೇವೇಗೌಡರು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ