ಇದೇ 12ರಿಂದ 14ರವರೆಗೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ

ಬೆಂಗಳೂರು,ಜ.8-ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್‍ನಲ್ಲಿರುವ ಗುಲ್ಬರ್ಗಾ ವಿಭಾಗೀಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ಇದೇ 12 ರಿಂದ 14ರವರೆಗೆ ಹಾಲುಮತ ಸಂಸ್ಕøತಿ ವೈಭವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 12 ರಂದು ಬೆಳಗ್ಗೆ 11.30ಕ್ಕೆ ಯುವಜನ ಸಮಾವೇಶವನ್ನು ಅರಣ್ಯ ಸಚಿವ ಸತೀಶ್ ಜಾರಕಿ ಹೊಳಿ ಉದ್ಘಾಟಿಸಲಿದ್ದು, ಕಾಗಿನೆಲೆ ಮಹಾಸಂಸ್ಥಾನ ಮಠದ ಕನಕ ಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.

ಪೌರಾಡಳಿತ ಸಚಿವ ಶಿವಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ , ಮುಜರಾಯಿ ಸಚಿವ ಪರಮೇಶ್ವರ್ ನಾಯಕ್, ಶಾಸಕರಾದ ಭೆರತಿ ಸುರೇಶ್, ಭೆರತಿ ಬಸವರಾಜ್ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಡಾ.ಪರಮೇಶ್, ಡಾ.ವಿಜಯಲಕ್ಷ್ಮಿ ಪರಮೇಶ್, ಮಣಿಪಾಲ್ ಆಸ್ಪತ್ರೆ ವೈದ್ಯ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಲೇಖಕ ಡಾ.ವಿರೂಪಾಕ್ಷಿ ಬರೆದಿರುವ ಕರ್ನಾಟಕ -ಆಂಧ್ರ ಗಡಿ ಭಾಗದ ಕುರುಬರು, ಸ್ವಾಮಿಲಿಂಗ ಹಾವಳಿ ಬರೆದಿರುವ ಹೋರಾಟಗಾರ ಕರಿಯಪ್ಪ ಹುಚ್ಚಣ್ಣನವರ ಎಂಬ ಪುಸ್ತಕವನ್ನು ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಬಿಡುಗಡೆ ಮಾಡಲಿದ್ದಾರೆ.

13 ರಂದು ಬೆಳಗ್ಗೆ 11.30ಕ್ಕೆ ನೌಕರರ ಸಮಾವೇಶವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಚಿವರಾದ ಬಂಡೆಪ್ಪ ಕಾಶಂಪುರ್, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ, ಬೀದರ್ ಜಿ.ಪಂ. ಅಧ್ಯಕ್ಷೆ ಭಾರತಿಭಾಯಿ ಶೇರಿಕಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ರೇವಣಪ್ಪ , ಕಾಗಿನೆಲೆ ಅಭಿವೃದ್ಧಿ ಆಯುಕ್ತ ಮಲ್ಲೇಶಪ್ಪ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರನ್ನು ಸನ್ಮಾನಿಸಲಾಗುವುದು.

ಅಂದು ರಾತ್ರಿ ವೀರರಾಣಿ ಅಹಲ್ಯಭಾಯಿ ಹೋಳ್ಕರ್ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

14 ರಂದು ಬೆಳಗ್ಗೆ 11.30ಕ್ಕೆ ಶ್ರೀ ಸಿದ್ದರಾಮೇಶ್ವರ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಹಾರಾಷ್ಟ್ರದ ಮೀನುಗಾರಿಕೆ ಹಾಗೂ ಪಶುಸಂಗೋಪನಾ ಸಚಿವ ಮಹದೇವ ಜಾನಕಾರ ಉದ್ಘಾಟಿಸಲಿದ್ದು, ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮೀಜಿ, ಗುರುಮಿಟ್ಕಲ್ ಶ್ರೀ ಶಾಂತವೀರಗುರು ಮುರುಘರಾಜೇಂದ್ರ ಸೇರಿದಂತೆ ವಿವಿಧ ಮಠಾಧೀಶರು ಸಾನಿಧ್ಯ ವಹಿಸಲಿದ್ದಾರೆ.

ಮಾಜಿ ಸಚಿವ ಆರ್.ಶಂಕರ್, ಸಂಸದ ಭಗವಂತ ಖೂಬ, ಶಾಸಕರಾದ ರಾಜುಗೌಡ, ಪ್ರತಾಪ್ ಗೌಡ ಪಾಟೀಲ್, ಅಮರೇಗೌಡ ಬಯ್ಯಾಪುರ,ಡಾ.ಶಿವರಾಜ್ ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮೂರು ದಿನಗಳು ನಡೆಯುವ ಹಾಲುಮತ ಸಂಸ್ಕøತಿ ವೈಭವ ಕಾರ್ಯಕ್ರಮದ ನೇತೃತ್ವವನ್ನು ಶ್ರೀ ಕ್ಷೇತ್ರದ ತಿಂಥಣಿ ಬ್ರಿಜ್‍ನ ಪೂಜ್ಯ ಶ್ರೀ ಸಿದ್ದರಾಮಾನಂದಸ್ವಾಮೀಜಿ ವಹಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ