ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನಂದನ್ ನಿಲೇಕಣಿ ಅವರನ್ನು ನೇಮಕ ಮಾಡಲಾಗಿದೆ.
ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, ಡಿಜಿಟಲ್ ಪಾವತಿಯ ಭದ್ರತೆ ಬಗ್ಗೆ ಈ ವಿಶೇಷ ಸಮಿತಿ ಆಳವಾಗಿ ಅಧ್ಯಯನ ಮಾಡಲಿದೆ. ಡಿಜಿಟಲ್ ಪಾವತಿ ಕುರಿತಂತೆ ಸಲಹೆ ಸೂಚನೆಗಳನ್ನು ಈ ಸಮಿತಿ ನೀಡಲಿದೆ.
ಈ ವಿಶೇಷ ಸಮಿತಿಯಲ್ಲಿ ನಾಲ್ವರು ಸದಸ್ಯರಿರಲಿದ್ದಾರೆ. ಸಮಿತಿಯ ಸದಸ್ಯರಾಗಿ ಎಚ್ ಆರ್ ಖಾನ್, ಕಿಶೋರ್ ಸಾಂಸಿ, ಅರುಣಾ ಶರ್ಮಾ, ಸಂಜಯ್ ಜೈನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಆರ್ ಬಿಐ ತಿಳಿಸಿದೆ.
RBI Appoints Nandan Nilekani As Chairman Of Digital Payments Panel