ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಬ್ಯಾನರ್, ಪ್ಲೆಕ್ಸ್ ಮತ್ತು ಬಿತ್ತ ಪ್ತ್ರಗಳನ್ನು ಅಂಟಿಸಿದರೆ, ಸಂಸ್ಥೆ ಮಾಲೀಕರ ವಿರುದ್ಧ ಕಾನೂನು ಕ್ರಮ

ಬೆಂಗಳೂರು, ಜ.9-ನಗರದ ರಸ್ತೆ ಬದಿಗಳಲ್ಲಿ, ಎಲೆಕ್ಟ್ರಿಕ್ ಫೋಲ್, ಮರಗಳು ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಬ್ಯಾನರ್, ಫ್ಲೆಕ್ಸ್, ಇನ್ನಿತರೆ  ಭಿತ್ತಿಪತ್ರಗಳನ್ನು ಅಂಟಿಸಿರುವುದು ಕಂಡು ಬಂದರೆ ಸಂಸ್ಥೆ ಮಾಲೀಕರ ವಿರುದ್ಧ  ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಮಾಜದ ಒಳಿತಿಗಾಗಿ ಸರ್ಕಾರ ರೂಪಿಸಿರುವ ವಿವಿಧ ಕಾನೂನು, ನಿಯಮಾವಳಿಗಳನ್ನು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನಗರದ ನಿವಾಸಿಗಳು ಈ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಪೊಲೀಸರಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ