ಪೆ.13 ರಂದು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಜನ್ಮದಿನಾಚರಣೆಯೊಳಗೆ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ

ಬೆಂಗಳೂರು, ಜ.9-ರೈತ ನಾಯಕ ಪ್ರೋ.ಎಂ.ಡಿ.ನಂಜುಂಡಸ್ವಾಮಿ ಅವರ ಜನ್ಮದಿನಾಚರಣೆಯೊಳಗಾಗಿ ರಾಜ್ಯ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಸಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾತನಾಡಿ, ಫೆ.13 ರಂದು ಪ್ರೋ.ಎಂ.ಡಿ.ನಂಜುಂಡಸ್ವಾಮಿ ಅವರ ಜನ್ಮದಿನವಾಗಿದ್ದು, ಆ ದಿನದೊಳಗೆ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರ ಸಮಸ್ಯೆಗಳನ್ನು ಈಡೇರಿಸದಿದ್ದರೆ  ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ತಿಳಿಸಿದರು.

ಕಬ್ಬು ಬೆಳೆಗಾರರು ಹೋರಾಟ ಮಾಡಿದರೂ ಕೂಡ ಯಾವುದೇ ರೀತಿಯ ಪ್ರತಿಫಲ ಸಿಕ್ಕಿಲ್ಲ. ಮುಖ್ಯಮಂತ್ರಿಗಳು ಅಧಿವೇಶನದಲ್ಲಿ ಚರ್ಚೆ ಮಾಡಿ ಕಬ್ಬಿಗೆ ನ್ಯಾಯವಾದ ಬೆಲೆ ನಿಗದಿ ಮಾಡುತ್ತೇವೆ ಎಂದು ಹೇಳಿದರು. ಆದರೆ ಇದುವರೆಗೂ ರಾಜ್ಯ ಅಥವಾ ಕೇಂದ್ರ ಸರ್ಕಾರಗಳು ಯಾವುದೇ ಕ್ರಮಕೈಗೊಳ್ಳದೆ ಹುಸಿ ಭರವಸೆಗಳನ್ನು ನೀಡುತ್ತಲೇ ಬರುತ್ತಿವೆ. ರೈತರು ಬೆಳೆದ ಬೆಲೆಗೆ ಯಾವುದೇ ರೀತಿಯ ಬೆಂಬಲ ಬೆಲೆ ಸಿಕ್ಕಿಲ್ಲ. ಆದ್ದರಿಂದ ಎಂ.ಡಿ.ನಂಜುಂಡಸ್ವಾಮಿ ಅವರ ಜನ್ಮದಿನಾಚರಣೆಯೊಳಗಾಗಿ  ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ