
ದೊಡ್ಡಬಳ್ಳಾಪುರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಹಾತಾಯಿಯೊಬ್ಬಳು ತ್ರಿವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯ ಮುನಿಯಮ್ಮ ಮೂರು ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. ಕೃಷ್ಣಪ್ಪರ ಪತ್ನಿಯಾದ ಮುನಿಯಮ್ಮಳಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಮುನಿಯಮ್ಮಳಿಗೆ ಹೆರಿಗೆ ಆಗಿದ್ದು, ಮೂವರು ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ.
ಒಂದು ಮಗು ಹುಟ್ಟುವಾಗಲೇ ಅಸುನೀಗಿದ್ದು, ಉಳಿದ ಎರಡು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯಧಿಕಾರಿ ತಿಳಿಸಿದರು. ತಾಯಿ-ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.