
ಬೆಂಗಳೂರು,ಜ.10- ಬಿಬಿಎಂಪಿನಿಯಮದಂತೆಕೌನ್ಸಿಲ್ ಸಭಾಂಗಣದಲ್ಲೇ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯನ್ನು ನಡೆಸಬೇಕೆಂದು ಬಿಜೆಪಿ ಆಗ್ರಹಿಸಿದೆ.
ಜ.17ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಡೆಯಲಿದೆ.ನಿಯಮದಂತೆ ಅಧ್ಯಕ್ಷರ ಚುನಾವಣೆ ನಡೆಯಬೇಕು.ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಿಯಮ ಬಾಹಿರವಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಗಳಿಸಲು ಯತ್ನಿಸುತ್ತಿದೆ.ಇದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.