ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಚ್.ಕೆ.ಪಾಟೀಲ್

ಬೆಂಗಳೂರು,ಜ.10-ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದು ಖುಷಿ ತರುವುದರ ಜೊತೆಗೆ ಜವಾಬ್ದಾರಿಯನ್ನೂ ಹೆಚ್ಚಿಸಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕಿಂತಲೂ ಈ ಸ್ಥಾನ ದೊಡ್ಡದು.ಪಕ್ಷವನ್ನು ಸಂಘಟಿಸುವಲ್ಲಿ ಹಾಗೂ ಮುಂಬರುವ ಚುನಾವಣೆಗಳಲ್ಲಿ ಪಕ್ಷಕ್ಕೆ ಗೆಲುವು ತಂದು ಕೊಡುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುವುದಾಗಿ ಹೇಳಿದರು.
ಕೇಂದ್ರ ಸರ್ಕಾರ ಸಾಂವಿಧಾನಿಕ ವಿಚಾರಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ.ಸಿಬಿಐ ನಿರ್ದೇಶಕರ ವಿಚಾರವಾಗಿ ಸುಪ್ರೀಂಕೋರ್ಟ್‍ನಲ್ಲಿ ಕೇಂದ್ರಕ್ಕೆ ಮುಖಭಂಗವಾಗಿದೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ಅನಗತ್ಯವಾಗಿ ಕೇಂದ್ರ ಮೂಗು ತೂರಿಸುತ್ತಿದೆ.ಯಾವುದೇ ಅಭಿವೃದ್ಧಿ ಕಾರ್ಯÀಗಳನ್ನು ಮಾಡದೆ ಜನರಿಗೆ ಸುಳ್ಳು ಭರವಸೆಗಳನ್ನುಕೊಡುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ವೈಫಲ್ಯಗಳನ್ನು ಜನತೆಗೆ ತಿಳಿಸುವುದು ಮತ್ತುಮೈತ್ರಿ ಸರ್ಕಾರ ಸಾಧನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.
ಮೈತ್ರಿ ಸರ್ಕಾರದಲ್ಲಿ ಯಾವುದೇ ರೀತಿಯ ಬಿರುಕಿಲ್ಲ. ಸಣ್ಣ ಪುಟ್ಟ ವೈಮನಸ್ಸುಗಳಿರುವುದು ನಿಜ ಅದನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳುವುದಾಗಿ ಹೇಳಿದ ಅವರು ಸರ್ಕಾರ ಐದು ವರ್ಷಗಳನ್ನು ಪೂರೈಸಲಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ