ಜಲ್ಲಿಕಟ್ಟು ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಸ್ಪರ್ಧಿಗಳು ಮತ್ತು ಗ್ರಾಮಸ್ಥರು ಕಲ್ಲು ತೂರಾಟ

ಕೃಷ್ಣಗಿರಿ,ಜ.10- ಕಾನೂನು ಬಾಹಿರವಾಗಿ ಜಲ್ಲಿಕಟ್ಟು(ಹೋರಿ ಬೆದರಿಸುವ ಸ್ಪರ್ಧೆ) ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಸ್ಪರ್ಧಿಗಳು ಮತ್ತು ಗ್ರಾಮಸ್ಥರು ಕಲ್ಲು ಗಳನ್ನು ತೂರಿ ಗಾಯಗೊಳಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯ ವ್ಯಾಪನಪಲ್ಲಿಯಲ್ಲಿ ನಡೆದಿದೆ.

ಈ ಘಟನೆಯಲ್ಲಿ ಪೊಲೀಸರು ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಸ್ಥರು ಗಾಯಗೊಂಡಿದ್ದಾರೆ. ಕಲ್ಲು ತೂರಾಟ ಮತ್ತು ಹಿಂಸಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 30ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂಕ್ರಾಂತಿಗೂ ಮುನ್ನ ಕೃಷ್ಣಗಿರಿ ಸೇರಿದಂತೆ ತಮಿಳುನಾಡಿನ ವಿವಿಧೆಡೆ ಅನಧಿಕೃತವಾಗಿ ಜಲ್ಲಿಕಟ್ಟು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಮೊನ್ನೆ ಕೆಲವು ಜಿಲ್ಲೆಗಳಲ್ಲಿ ನಡೆದ ಗೂಳಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿತಕ್ಕೆ ಅನೇಕರು ಗಾಯಗೊಂಡಿದ್ದಾರೆ.

ಸುಪ್ರೀಂಕೋರ್ಟ್ ಆದೇಶವಿದ್ದರೂ ನಿಯಮ ಉಲ್ಲಂಘಿಸಿ ಜಲ್ಲಿಕಟ್ಟು ಸ್ಪರ್ಧೆಗಳು ನಡೆಯುತ್ತಿದ್ದು, ಅವುಗಳನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ