
ಬೆಂಗಳೂರು,ಜ.10- ಬಿಡಿಎ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸ್ಟೀಲ್ ಬ್ರಿಡ್ಜ್ ಯೋಜನೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಬಿಡಿಎ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಬಿಡಿಎ ಸದಸ್ಯನಾಗಿ ಕೆಲಸ ಮಾಡಿದ್ದೆ.ಸಾರ್ವಜನಿಕರು ಬಿಡಿಎಗೆ ಬಂದರೆ ಸಮಸ್ಯೆ ಬಗೆಹರಿಯುತ್ತದೆ ಎಂಬ ವಿಶ್ವಾಸ ಮೂಡಿಸುವಂತಹ ಜನಸ್ನೇಹಿ ಆಡಳಿತವನ್ನು ರೂಪಿಸಲು ಪ್ರಯತ್ನಿಸುತ್ತೇನೆ. ಜನರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ವಿಶ್ವಾಸ ಮೂಡಿಸಬೇಕಿದೆ ಎಂದು ಹೇಳಿದರು.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಶಾಸಕರಾದ ಭೆರತಿ ಬಸವರಾಜ್ ಮತ್ತಿತರರು ಹಾಜರಿದ್ದು ಶುಭ ಹಾರೈಸಿದರು.