ಬೆಂಗಳೂರು, ಜ.11- ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್‍ಸಿಂಗ್, ನಾಗೇಂದ್ರ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾದರು.
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದ್‍ಸಿಂಗ್, ನಾಗೇಂದ್ರ ಅವರಿಗೆ ವಿಶೇಷ ನ್ಯಾಯಾಲಯ ಕೋರ್ಟ್‍ಗೆ ಹಾಜರಾಗಬೇಕೆಂದು ವಾರೆಂಟ್ ಜಾರಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ನಮ್ಮ ಕಕ್ಷಿದಾರರು ಜನಪ್ರತಿನಿಧಿಗಳಾಗಿರುವುದರಿಂದ ಎಲ್ಲ ಸಮಯದಲ್ಲಿ ಕೋರ್ಟ್‍ಗೆ ಹಾಜರಾಗಲು ಸಾಧ್ಯವಿಲ್ಲ. ವಿನಾಯಿತಿ ನೀಡಬೇಕೆಂದು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.
ವಿಚಾರಣೆಯನ್ನು ಜ.16ಕ್ಕೆ ಮುಂದೂಡಿತು.ನಿನ್ನೆಯಷ್ಟೆ ನ್ಯಾಯಾಧೀಶರು ಖುದ್ದು ವಿಚಾರಣೆಗೆ ಹಾಜರಾಗಬೇಕೆಂದು ಕಟ್ಟಪ್ಪಣೆ ಮಾಡಿದ್ದರು.