ಬಿಜೆಪಿ ಮಾಜಿ ಸಿಎಂಗಳಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ

ನವದೆಹಲಿ, ಜ.11- ಬಿಜೆಪಿ ಮಾಜಿ ಮುಖ್ಯಮಂತ್ರಿಗಳಾದ ರಮಣ್‍ಸಿಂಗ್, ಶಿವರಾಜ್‍ಸಿಂಗ್ ಚೌಹಾಣ್ ಮತ್ತು ವಸುಂಧರಾ ರಾಜೇ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಛತ್ತೀಸ್‍ಗಢ್, ಮಧ್ಯಪ್ರದೇಶ ಮತ್ತು ರಾಜಸ್ತಾನ ವಿಧಾನಸಭೆಗಳಿಗೆ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದು, ಈ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತವಿದೆ.

ಬಿಜೆಪಿಯ ಭದ್ರಕೋಟೆಯಾಗಿದ್ದ ಈ ಮೂರು ರಾಜ್ಯಗಳಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಈ ಮೂವರು ವಿಫಲರಾಗಿದ್ದಾರೆ. ಅವರು ರಾಷ್ಟ್ರ ರಾಜಕಾರಣದಲ್ಲಿ ಕೆಲಸ ಮಾಡಲು ಅನುವಾಗುವಂತೆ ಇವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಪ್ರಕಟಣೆಯಲ್ಲಿ ಈ ಮೂವರ ನೇಮಕವನ್ನು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ