ಚಂಡೀಗಢ: ಪತ್ರಕರ್ತ ರಾಮಚಂದ್ರ ಛತ್ರಪತಿ ಹತ್ಯೆ ಪ್ರಕರಣದ ತೀರ್ಪು ಹೊರಬಿದಿದ್ದು, ಡೇರಾ ಸಚ್ಚಾ ಸೌಧ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹೀಮ್ ಬಾಬಾ ಮತ್ತು ಇತರ ಮೂವರು ದೋಷಿಗಳೆಂದು ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಿದೆ. ದೋಷಿಗಳ ಶಿಕ್ಷೆ ಪ್ರಮಾಣವನ್ನು ಜ.17ರಂದು ನ್ಯಾಯಾಲಯ ಪ್ರಕಟಿಸಲಿದೆ.
ತೀರ್ಪಿನ ಹಿನ್ನೆಲೆಯಲ್ಲಿ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪೂರಾ ಸಚ್ ಎಂಬ ಪತ್ರಿಕೆಯಲ್ಲಿ ರಾಮಚಂದ್ರ ಛತ್ರಪತಿ ಆಶ್ರಮದಲ್ಲಿ ನಡೆಯುತ್ತಿದ್ದ ಅವ್ಯವಹಾರ ಮತ್ತು ಲೈಂಗಿಕ ಕಿರುಕುಳದ ಬಗ್ಗೆ ವಿಸ್ತೃತ ವರದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 2002ರಲ್ಲಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ರಹೀಮ್ಸಿಂಗ್ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಈಗ ಪತ್ರಕರ್ತನ ಹತ್ಯೆಯಲ್ಲಿಯೂ ರಾಮ್ ರಹೀಮ್ ಸಿಂಗ್ ದೋಷಿ ಎಂಬುದು ಸಾಬೀತಾದ ಹಿನ್ನಲೆಯಲ್ಲಿ ಬಾಬಾಗೆ ಜೈಲು ಶಿಕ್ಷ್ಜೆ ಖಾಯಂ ಆಗಲಿದೆ.
Gurmeet Ram Rahim, convicted, in journalist murder case