ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಮಗನ ಅದ್ಧೂರಿ ವಿವಾಹಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿಲ್ಲ!

ಮುಂಬೈ,ಜ.11- ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ತಮ್ಮ ಮಗನ ಅದ್ಧೂರಿ ವಿವಾಹಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿಲ್ಲ ಎನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಎನ್‍ಸಿಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲಿರುವ ಎಂಎನ್‍ಎಸ್ ಮುಖ್ಯಸ್ಥ ರಾಜ್ ಠಾಕ್ರೆ, ತಮ್ಮ ಮಗನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ. ಆಮಂತ್ರಿತರ ಪಟ್ಟಿಯಲ್ಲೂ ಮೋದಿ ಹೆಸರಿಲ್ಲದಿರುವುದು ವಿಚಿತ್ರವೆನಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಎಂಎನ್‍ಎಸ್ ಪಕ್ಷ ಕಾಂಗ್ರೆಸ್ ಬೆಂಬಲಿತ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗಿದೆ.ಇದೇ ಕಾರಣಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೇರಿದಂತೆ ಸುಶೀಲ್ ಕುಮಾರ್ ಶಿಂಧೆ, ಪೃಥ್ವಿರಾಜ್ ಚೌಹಾಣ್, ಮಿಲಿಂದ್ ಡಿಯೋರ ಅವರನ್ನು ಆಹ್ವಾನಿಸಲು ಠಾಕ್ರೆ ನಿರ್ಧರಿಸಿದ್ದಾರೆ.

ಜೊತೆಗೆ ಎನ್‍ಸಿಪಿ ನಾಯಕರಾದ ಶರದ್ ಪವಾರ್, ಅಜಿತ್ ಪವಾರ್, ಸುನೀಲ್ ತತ್ಕರೆ, ಜಯಂತ್ ಪಾಟೀಲ್ ಮುಂತಾದ ನಾಯಕರನ್ನು ಮಾತ್ರ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ