ಬೆಂಗಳೂರು, ಜ.11- ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಜಯದೇವ ಆಸ್ಪತ್ರೆ ವೈದ್ಯರಾದ ಡಾ.ಮಂಜುನಾಥ್ ನೇತೃತ್ವದ ತಂಡ ಇಂದು ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ನಡೆಸಿದೆ.
ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದ ತಜ್ಞ ವೈದ್ಯರ ತಂಡ ಶ್ರೀಗಳಿಗೆ ರಕ್ತದ ಕಣಗಳು ಹೆಚ್ಚಾಗಿ ಉತ್ಪಾದನೆಯಾಗಲು ಯಾವ ಔಷಧಿಗಳನ್ನು ನೀಡಬೇಕು ಎಂದು ತಮಿಳುನಾಡು, ಬೆಂಗಳೂರು, ತುಮಕೂರು ವೈದ್ಯರ ಜೊತೆ ಮಾತುಕತೆ ನಡೆಸಿದರು.ಶ್ರೀಗಳು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸವಿದೆ.ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶ್ರೀಗಳ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ, ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.