ಬೆಂಗಳೂರು, ಜ.11- ಇದೇ ಜನವರಿ 3ರಿಂದ ಎರಡು ದಿನಗಳ ಕಾಲ ಯಶ್ ಹಾಗೂ ಅವರ ಪತ್ನಿ ನಿವಾಸ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಆಸ್ತಿ ದಾಖಲೆಗಳು, ಹೂಡಿಕೆ ಪತ್ರಗಳನ್ನು ವಶಪಡಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಇಂದು ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಯಶ್ ತಾಯಿ ಪುಷ್ಪಾ ಅವರೊಂದಿಗೆ ಹಾಜರಾದರು.
ಐಟಿ ದಾಳಿ ಸಂದರ್ಭದಲ್ಲಿ ಹಲವು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.ಆಸ್ತಿ, ಹಣಕಾಸು ವ್ಯವಹಾರ, ಬ್ಯಾಂಕ್ ವಹಿವಾಟಿನ ಸಂಬಂಧದ ದಾಖಲೆಗಳನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.ಈ ಸಂಬಂಧ ಸೂಕ್ತ ಮಾಹಿತಿ ನೀಡಲು ಐಟಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ಯಶ್ ಮತ್ತು ಅವರ ತಾಯಿ ಐಟಿ ಅಧಿಕಾರಿಗಳ ಎದುರು ಹಾಜರಾಗಿ ಮಾಹಿತಿ ನೀಡಿದ್ದಾರೆ.