ನಿರುದ್ಯೋಗ ಯುವಕ-ಯುವತಿಯರಿಗೆ ಉಚಿತ ಅಣಬೆ ತಯಾರಿಕೆ ಶಿಬಿರ

ಬೆಂಗಳೂರು,ಜ.12-ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಲ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಟ್ರೈನಿಂಗ್ ಇನ್ಸಿಟ್ಯೂಟ್ ಫಾರ್ ಮೈಕ್ರೋ ಫೈನಾನ್ಸ್ ಸಂಸ್ಥೆ ವತಿಯಿಂದ ಉಚಿತ ಅಣಬೆ ತಯಾರಿಕೆ ಶಿಬಿರವನ್ನು ಏರ್ಪಡಿಸಲಾಗಿದೆ.

ಜನವರಿ ಮೂರನೇಯ ವಾರದಿಂದ 10 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ 18ರಿಂದ 45 ವರ್ಷದವರು ಪಾಲ್ಗೊಳ್ಳಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರುನಗರ, ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯವರು ಸಹ ಪಾಲ್ಗೊಳ್ಳಬಹುದಾಗಿದೆ.

ತರಬೇತಿ ಉಚಿತವಾಗಿರುತ್ತದೆ.ಉಚಿತ ಊಟ ಮತ್ತುವಸತಿ ಸೌಕರ್ಯವನ್ನು ಕಲ್ಪಿಸಲಾಗಿದೆ.ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದವರಾಗಿದ್ದು, ಕನಿಷ್ಠ 8ನೇ ತರಗತಿ ಓದಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಜ.14ರಂದು ಬೆಳಗ್ಗೆ 10.30ಕ್ಕೆ ಹೊಸಕೋಟೆ ತಾಲ್ಲೂಕಿನ ಹಸಿಗಾಳ, ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ದಾಖಲಾತಿಯೊಂದಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಮೊ: 9900047146, 963255987 ಅಥವಾ 7353413949 ಸಂಪರ್ಕಿಸಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ