ಶ್ರೀನಗರ: ಸುಧಾರಿತ ಸ್ಫೋಟಕ ಸಾಧನ (ಐಇಡಿ) ತಯಾರಿಸುವುದರಲ್ಲಿ ನಿಪುಣರಾಗಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಜೀನತ್ ಉಲ್ ಇಸ್ಲಾಂ ಮತ್ತು ಮತ್ತೋರ್ವ ಉಗ್ರನನ್ನು ಹೊಡೆದುರುಳಲಾಗಿದೆ. ಈತ ಈ ಮೊದಲು ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯಲ್ಲಿದ್ದ. ಪ್ರಸ್ತುತ ಆತ ಅಲ್ ಬದರ್ ಎಂಬ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದು, ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕತಾಪುರ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಮೇರೆಗೆ ಶೋಧ ಕಾರ್ಯ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು. ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
Al-Badr commander Zeenat-ul-Islam among two terrorists killed in Kulgam encounter