ಐಇಡಿ ತಯಾರಕ ನಿಪುಣ ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಸುಧಾರಿತ ಸ್ಫೋಟಕ ಸಾಧನ (ಐಇಡಿ) ತಯಾರಿಸುವುದರಲ್ಲಿ ನಿಪುಣರಾಗಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಜೀನತ್​ ಉಲ್​ ಇಸ್ಲಾಂ ಮತ್ತು ಮತ್ತೋರ್ವ ಉಗ್ರನನ್ನು ಹೊಡೆದುರುಳಲಾಗಿದೆ. ಈತ ಈ ಮೊದಲು ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆಯಲ್ಲಿದ್ದ. ಪ್ರಸ್ತುತ ಆತ ಅಲ್​ ಬದರ್​ ಎಂಬ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದು, ಮೋಸ್ಟ್​ ವಾಂಟೆಡ್​ ಉಗ್ರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕತಾಪುರ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಮೇರೆಗೆ ಶೋಧ ಕಾರ್ಯ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು. ಎನ್​ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

Al-Badr commander Zeenat-ul-Islam among two terrorists killed in Kulgam encounter

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ