ಲಖನೌ: ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
ಲಖನೌನ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಎಲ್ಲಾ 80 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಇದೀಗ ಚಳಿಗಾಲದ ಅಧಿವೇಶನ ಕೊನೆಗೊಂಡಿದೆ, 2019 ಚುನಾವಣೆ ಸಿದ್ಧತೆಗಳು ಪ್ರಾರಂಭವಾಗಿದೆ ಎಂದಿದ್ದಾರೆ.
2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಸಂಭವಿಸಲಿದೆ ಎಂದಿದ್ದಾರೆ. ಕಾಂಗ್ರೆಸ್ ಯಾವಾಗಲೂ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಏಳ್ಗೆಯನ್ನು ಗುರಿಯಾಗಿರಿಸಿಕೊಳ್ಳುತ್ತದೆ. ಬಿಜೆಪಿಯಂತೆ ಕಾಂಗ್ರೆಸ್ ಎಂದಿಗೂ ಸುಳ್ಳು ಭರವಸೆ ನೀಡುವುದಿಲ್ಲ.ಕಾಂಗ್ರೆಸ್ ಎಲ್ಲಾ ಧರ್ಮದವರನ್ನು ಸಮಾನರೆಂದು ಕಾಣುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಭಾರತ ಸ್ವಾತಂತ್ರ ಸಂಗ್ರಾಮದಲ್ಲಿದ್ದ ಕಾರಣಕ್ಕೆ ಇಂದು ನಾವು ಸ್ವತಂತ್ರರಾಗಿದ್ದೇವೆ. ನಮ್ಮ ಪಕ್ಷ ದೇಶಕ್ಕೆ ಪ್ರಥಮ ಪ್ರಧಾನಿಯನ್ನು ನೀಡಿದೆ ಎಂದು ಆಜಾದ್ ಹೇಳಿದ್ದಾರೆ.
Congress to contest all 80 seats in UP for 2019 Lok Sabha elections