ವೇಶ್ಯವಾಟಿಕೆ ಅಡ್ಡೆ ಮೇಲೆ ಪೊಲೀಸರಿಂದ ದಾಳಿ ಯುವತಿಯರ ರಕ್ಷಣೆ

ಮೈಸೂರು, ಜ.13-ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಎಡತಾಳು ಗ್ರಾಮದ ರಘುನಂದ, ಬೆಂಗಳೂರಿನ ಮೂಡಲಪಾಳ್ಯದ ಗೋವಿಂದ ಹಾಗೂ ಚಿತ್ರದುರ್ಗ ಜಿಲ್ಲೆಯ ಮಧುಕರ ಬಂಧಿತ ಆರೋಪಿಗಳು.

ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೊಟೇಲ್ ಮೈಸೂರು ಕಾಂಪ್ಲೆಕ್ಸ್‍ವೊಂದರ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಇನ್ಸ್‍ಪೆಕ್ಟರ್ ಎ.ಮಲ್ಲೇಶ್, ಲಷ್ಕರ್ ಠಾಣೆ ಇನ್ಸ್‍ಪೆಕ್ಟರ್ ವಿವೇಕಾನಂದ, ಸಬ್‍ಇನ್ಸ್‍ಪೆಕ್ಟರ್ ಪೂಜಾ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಮೂವರನ್ನು ಬಂಧಿಸಿ ಕೇರಳ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ