ಎಸ್ಪಿ-ಬಿಎಸ್ ಪಿ ಮೈತ್ರಿಯಿಂದ ನಿರಾಸೆಯಾಗಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉತ್ತರಪ್ರದೇಶದಲ್ಲಿ ಎಸ್ ಪಿ ಹಾಗೂ ಬಿಎಸ್ ಪಿ ಮೈತ್ರಿ ಮಾಡಿಕೊಂಡಿರುವುದರಿಂದ ನಮಗೆ ಯಾವುದೇ ನಿರಾಸೆ ಉಂಟುಮಾಡಿಲ್ಲ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಆಯಾ ಪಕ್ಷದ ಮುಖಂಡರು ಸೇರಿ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಏನು ಮಾಡಬೇಕೆಂದು ನಿರ್ಧರಿಸುತ್ತೇವೆ. ಉತ್ತರಪ್ರದೇಶದ ಜನರ ಸೇವೆ ಮಾಡಲು ಕಾಂಗ್ರೆಸ್​ಗೆ ಸಾಕಷ್ಟು ಅವಕಾಶವಿದೆ. ಬಿಎಸ್​ಪಿ ಮತ್ತು ಎಸ್​ಪಿ ಮುಖಂಡರ ಬಗ್ಗೆ ನನಗೆ ಅಪಾರ ಗೌರವವಿದೆ. ಬೇಕಾಗಿದ್ದನ್ನು ಮಾಡುವ ಹಕ್ಕು ಅವರಿಗೆ ಇದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ನ್ನು ರಾಜ್ಯದಲ್ಲಿ ಬಲಪಡಿಸುವ ಜವಾಬ್ದಾರಿ ನಮ್ಮ ಮೇಲೆ ಇದ್ದು, ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್​ ರಾಜಕೀಯ ಮೈತ್ರಿ ಮಾಡಿಕೊಂಡಿದ್ದು ಸಮರ್ಥವಾಗಿ ನಿಭಾಯಿಸುತ್ತಿದೆ. ಬಿಎಸ್​ಪಿ-ಎಸ್​ಪಿ ಪಕ್ಷಗಳು ಕಾಂಗ್ರೆಸ್​ ಬಗ್ಗೆ ಅಸಮಾಧಾನ ಹೊಂದಿವೆ. ಆದರೆ ಅದನ್ನೂ ನಾವು ಖುಷಿಯಿಂದಲೇ ಸ್ವಾಗತಿಸುತ್ತೇವೆ ಎಂದಿದ್ದಾರೆ.

SP-BSP alliance,lok sabha election,rahul gandhi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ