ಬೆಂಗಳೂರು,ಜ.14-ನಾಳೆ ಸಂಕಾಂತಿ ಹಬ್ಬ ಹಿನ್ನಲೆ, ಹಬ್ಬ ಆಚರಿಸುವ ಜನರೇ ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು.ಬಿಬಿಎಂಪಿ ನಿಗದಿಪಡಿಸಿರುವ ಜಾಗದಲ್ಲೇ ತ್ಯಾಜ್ಯ ಹಾಕಬೇಕು.ಅದನ್ನು ಬಿಟ್ಟು ಎಲ್ಲೆಂದರಲ್ಲಿ ಕಸ ಹಾಕಿದರೆ ದಂಡ ಕಟ್ಟಿಟ್ಟ ಬುತ್ತಿ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಎಚ್ಚರಿಸಿದ್ದಾರೆ.
ಈಗಾಗಲೇ ಬಿಬಿಎಂಪಿಯ 8 ವಲಯಗಳಲ್ಲಿ ಮಾರ್ಷಲ್ಗಳನ್ನು ನೇಮಿಸಲಾಗಿದೆ.ಮಾರ್ಷಲ್ಗಳು ಎಲ್ಲೆಡೆ ನಿಗಾ ಇರಿಸಿದ್ದಾರೆ.ಒಂದು ವೇಳೆ ಯಾರಾದರೂ ಎಲ್ಲೆಂದರಲ್ಲಿ ಕಸ ಹಾಕಿದರೆ ಅವರಿಗೆ ಸ್ಥಳದಲ್ಲೇ ದಂಡ ವಿಧಿಸುತ್ತಾರೆ.
ಈಗಾಗಲೇ ಮಾರ್ಷಲ್ಗಳು ಕಾರ್ಯಪ್ರವೃತ್ತರಾಗಿದ್ದು, ಹದ್ದಿನ ಕಣ್ಣು ಇಟ್ಟಿದ್ದಾರೆ.ಈವರೆಗೆ ಎಲ್ಲೆಂದರಲ್ಲಿ ಕಸ ಹಾಕುವವರಿಂದ 17 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ.