ಕಾಂಗ್ರೆಸ್ ನ ಕೆಲ ಶಾಸಕರು ನಾಟ್ ರೀಚೆಬಲ್, ಮೈತ್ರಿ ಸರ್ಕಾರದಲ್ಲಿ ನಡುಕ?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಶುರುವಾಗಿದೆ. ಸಂಕ್ರಾಂತಿ ವೇಳೆಗೆ ಬಿಜೆಪಿ ಮೈತ್ರಿ ಸರ್ಕಾರಕ್ಕೆ ದೊಡ್ಡ ಹೊಡೆತ ನೀಡಲಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿಡುತ್ತಿದ್ದು ಇದಕ್ಕೆ ಇಂಬು ಕೊಡುವಂತೆ ಕೆಲ ಕಾಂಗ್ರೆಸ್ ಶಾಸಕರು ನಾಟ್ ರೀಚೆಬಲ್ ಆಗಿರುವುದು ಮೈತ್ರಿ ಸರ್ಕಾರದಲ್ಲಿ ನಡುಕ ಸೃಷ್ಟಿಸಿದೆ.

ಕಾಂಗ್ರೆಸ್ ನಲ್ಲಿ ಕೆಲ ಅತೃಪ್ತ ಶಾಸಕರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇನ್ನು ಕೆಲ ಶಾಸಕರು ತಮ್ಮ ಮೊಬೈಲ್ ನಾಟ್ ರೀಚೆಬಲ್ ಮಾಡಿಕೊಂಡಿದ್ದು ಕೆಲವರು ಬಹಿರಂಗವಾಗಿ ಕಾಂಗ್ರೆಸ್ ನ ವಿರುದ್ಧ ಮಾತನಾಡುತ್ತಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದಲ್ಲಿ ಬಂಡಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಶಾಸಕರೆಲ್ಲ ದೆಹಲಿಯಲ್ಲೇ ಉಳಿಸಿಕೊಂಡಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತೆರೆಮರೆ ಹಿಂದೆ ಮಾಡಿಕೊಂಡು ಬಂದಿತ್ತು.

ಸದ್ಯ ಕಾಂಗ್ರೆಸ್ ನ ಶಾಸಕ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದು, ಆನಂದ್ ಸಿಂಗ್, ನಾಗೇಂದ್ರ ಹಾಗೂ ಪಕ್ಷೇತರ ಶಾಸಕ ಆರ್ ಶಂಕರ್ ಸಹ ಅಂತರ ಕಾಯ್ದುಕೊಂಡಿದ್ದಾರೆ. ಇನ್ನು ಸದ್ಯ ಚಿಂಚೋಳಿ ಶಾಸಕ ಉಮೇಶ್ ಜಾದವ್ ಅವರು ತಮ್ಮ ಮೊಬೈಲ್ ಅನ್ನು ನಾಟ್ ರೀಚೆಬಲ್ ಮಾಡಿಕೊಂಡಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ