ಬೆಂಗಳೂರು, ಜ.15- ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ.ಬಿಜೆಪಿಯ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಇಂದು ಬೆಳಗ್ಗೆ ಸದಾಶಿವನಗರದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಬಿಜೆಪಿಯ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಿಸಿದರೂ ನಾನು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ.
ನಾನು ಕಾಂಗ್ರೆಸ್ನಲ್ಲೇ ಇದ್ದೇನೆ ಹಾಗಾಗಿಯೇ ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.