
ಲಖನೌ: ಭಿನ್ನಾಭಿಪ್ರಾಯಗಳನ್ನು ಮರೆತು ಎಸ್ಪಿ ಮತ್ತು ಬಿಎಸ್ಪಿಯ ಎಲ್ಲಾ ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಇದೇ ನೀವು ನನ್ನ ಹುಟ್ಟುಹಬ್ಬಕ್ಕೆ ನನಗೆ ನೀಡುವ ಅತ್ಯುತ್ತಮ ಉಡುಗೊರೆ ಎಂದು ಮಾಯಾವತಿ ಕರೆ ನಿಡಿದ್ದಾರೆ.
ಬಿಎಸ್ಪಿ ವರಿಷ್ಠೆ ಮಾಯಾವತಿ ಅವರಿಗೆ ಇಂದು 63ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಲಖನೌದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಪಕ್ಷದ ನೀತಿಗಳ ಬಗ್ಗೆ ವಿವರಿಸಿದರು. ಸಮಾಜವಾದಿ ಪಕ್ಷದ ಜತೆ ಮೈತ್ರಿ ಘೋಷಿಸಿದ ಬಳಿಕ ಇದೇ ಮೊದಲ ಬಾರಿಗೆ ಮಾಯಾವತಿ ಏಕಾಂಗಿ ಸುದ್ದಿಗೋಷ್ಠಿ ನಡೆಸಿದ್ದಾರೆ.
Lok Sabha eletion,SP-BSP,Mayawati