ನಾಳೆ ನಡೆಯಲಿರುವ ಬಿಬಿಎಂಪಿ ಸ್ಥಾಯಿಸಮಿತಿ ಅಧ್ಯಕ್ಷರ ಚುನಾವಣೆ

ಬೆಂಗಳೂರು,ಜ.16- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿಸಮಿತಿಗಳ ಅಧ್ಯಕ್ಷರ ಚುನಾವಣೆ ನಾಳೆ ನಡೆಯಲಿದೆ.
ಈ ಹಿಂದೆ ವಿವಿಧ ಕಾರಣಗಳಿಗಾಗಿ ಎರಡು ಬಾರಿ ಮುಂದೂಡಿಕೆಯಾಗಿದ್ದ ಸ್ಥಾಯಿಸಮಿತಿ ಅಧ್ಯಕ್ಷರ ಚುನಾವಣೆಗೆ ನಾಳೆ ಮುಹೂರ್ತ ನಿಕ್ಕಿಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.

ಮೇಯರ್ ಕೊಠಡಿಯಲ್ಲೇ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಗೆ ನಿರ್ಧರಿಸಲಾಗಿದ್ದು ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಹಾಗೂ ವಾರ್ಡ್ ಮಟ್ಟದ ಕಾಮಗಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದ್ದು, ಚುನಾವಣೆ ಕಗ್ಗಂಟಾಗಿ ಪರಿಣಾಮಿಸಿ ಎರಡು ಬಾರಿ ಮುಂದೂಡಿಕೆಯಾಗಿತ್ತು.

ನಾಳೆ ನಡೆಯಲಿರುವ ಚುನಾವಣೆಯಲ್ಲೂ ಇದೇ ಪರಿಸ್ಥಿತಿ ಮುಂದುವರೆದರೆ, ಮತ್ತೆ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.
ಹಾಗೇನಾದರೂ ಆದಲ್ಲಿ ಬಿಬಿಎಂಪಿ ಸದ್ಯದಲ್ಲೇ ಬಜೆಟ್ ಮಂಡನೆ ಮಾಡಬೇಕಿರುವುದರಿಂದ ತೆರಿಗೆ ಸ್ಥಾಯಿ ಸಮಿತಿಗಷ್ಟೇ ಚುನಾವಣೆ ನಡೆಸಿ ಉಳಿದ ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಮತ್ತೆ ಮುಂದೂಡಲಿದೆ.
ಒಟ್ಟಾರೆ ನಾಳಿನ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ