ಬೆಂಗಳೂರು,ಜ.16-ಪಕ್ಷದ ಶಾಸಕರೊಂದಿಗೆ ಹರಿಯಾಣದ ಗುರುಗ್ರಾಮದಲ್ಲಿರುವ ಐಟಿಸಿ ಗ್ರ್ಯಾಂಡ್ ಭಾರತ್ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪ ಬೆಂಗಳೂರಿನತ್ತ ಪ್ರಯಾಣ ಆರಂಭಿಸಲಿದ್ದಾರೆ.
ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನಜಾವ ಆಸ್ಪತ್ರೆಯಿಂದ ಮಠಕ್ಕೆ ಸ್ದಳಾಂತರ ಮಾಡಲಾಗಿದ್ದು, ಶ್ರೀಗಳ ಆರೋಗ್ಯ ವಿಚಾರಿಸಲು ಯಡಿಯೂರಪ್ಪ ಮತ್ತು ಲಿಂಗಾಯತ ಸಮುದಾಯದ ಶಾಸಕರು ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ.
ನಂತರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿ ದೆಹಲಿಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಹರಿಯಾಣಕ್ಕೆ ಪ್ರಯಾಣ ಬೆಳಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನಲೆಯಲ್ಲಿ ಶ್ರೀಗಳ ಅಪೇಕ್ಷೆ ಮೇರೆಗೆ ಮಠಕ್ಕೆ ಕರೆತರಲಾಗಿದ್ದು ಮಠದಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ.
ಈ ಹಿನ್ನಲೆಯಲ್ಲಿ ಈಗಾಗಲೇ ಮಾಜಿ ಸಚಿವ ವಿ.ಸೋಮಣ್ಣ ಮಠಕ್ಕೆ ಭೇಟಿ ನೀಡಿ ಶ್ರೀಗಳ ಯೋಗಕ್ಷೇಮ ವಿಚಾರಿಸಿದ್ದು ಯಡಿಯೂರಪ್ಪ ಮತ್ತು ಇತರ ಲಿಂಗಾಯತ ಶಾಸಕರು ಕೂಡ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.