ಬೆಂಗಳೂರು, ಜ.16- ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 156 ತಾಲ್ಲೂಕುಗಳ ಬರಪೀಡಿತವಾಗಿರುವ ಸಂದರ್ಭದಲ್ಲಿ ಬಿಜೆಪಿಯ ಶಾಸಕರು ಉತ್ತರ ಭಾರತದಲ್ಲಿ ಮೋಜುಮಸ್ತಿಯಲ್ಲಿ ತೊಡಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಟ್ವೀಟ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬರ ಕಾಡುತ್ತಿದೆ. ಆದರೆ, ಬಿಜೆಪಿ ತನ್ನ ಶಾಸಕರನ್ನು ಒಂದು ವಾರದಿಂದ ಉತ್ತರ ಭಾರತಕ್ಕೆ ಕಳುಹಿಸಿ ಮೋಜುಮಸ್ತಿಗೆ ಅವಕಾಶ ಮಾಡಿಕೊಟ್ಟಿದೆ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿ ಅವರಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿಯವರಿಂದಾಗಿ ಬರ ಪೀಡಿತ ಪ್ರದೇಶಗಳ ಜನರಿಗೆ ಅನ್ಯಾಯವಾಗುತ್ತಿದೆ.ಇದಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.