ಜ.18ರಿಂದ ಜ.27ರವರೆಗೆ ಫಲಪುಷ್ಪ ಪ್ರದರ್ಶನ

ಬೆಂಗಳೂರು,ಜ.16-ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಗರದ ಲಾಲ್‍ಬಾಗ್‍ನಲ್ಲಿ ಆಯೋಜಿಸಲಾಗುವ ಫಲಪುಷ್ಪ ಪ್ರದರ್ಶನವನ್ನು ಈ ಬಾರಿ ಜ.18ರಿಂದ 27ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ವೈ.ಎಸ್.ಪಾಟೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಉದ್ಯಾನ ಕಲಾಸಂಘ ಹಾಗೂ ತೋಟಗಾರಿಕೆ ಇಲಾಖೆ ಜಂಟಿಯಾಗಿ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನವನ್ನು ನಡೆಸುತ್ತಿದ್ದು, ಈ ಬಾರಿ ಮಹಾತ್ಮ ಗಾಂಧೀಜಿಯವರ 150ನೇ ವರ್ಷಾಚರಣೆ ಅಂಗವಾಗಿ ಫಲಪುಷ್ಪ ಪ್ರದರ್ಶನವನ್ನು ಅವರಿಗೆ ಅರ್ಪಿಸಲು ಉದ್ದೇಶಿಸಲಾಗಿದೆ ಎಂದರು.

ಗಾಜಿನ ಮನೆಯಲ್ಲಿ ಹೂಗಳಿಂದ ಸಬರಮತಿ ಆಶ್ರಮ, ಬಾಪು ಮನೆ, ದಂಡಿ ಸತ್ಯಾಗ್ರಹ ಮತ್ತಿತರಚಿತ್ರಣವನ್ನು ಫಲಪುಷ್ಪ ಪ್ರದರ್ಶನದಲ್ಲಿ ಪ್ರದರ್ಶಿಸಲಾಗುತ್ತಿದೆ.
ವಾರ್ತಾ ಇಲಾಖೆ ಸಹಯೋಗದಲ್ಲಿ ಗಾಂಧೀಜಿಯವರ ಭಾವಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ 5ರಿಂದ 6 ಲಕ್ಷ ಜನ ಪ್ರದರ್ಶನ ವೀಕ್ಷಿಸುವ ನಿರೀಕ್ಷೆ ಇದೆ.
ಸಿಸಿ ಕ್ಯಾಮೆರಾ ಅಳವಡಿಸುವುದು ಸೇರಿದಂತೆ ಪ್ರದರ್ಶನಕ್ಕೆ ಎಲ್ಲ ರೀತಿಯ ಸೂಕ್ತ ಭದ್ರತೆ ಒದಗಿಸಲಾಗತ್ತಿದ್ದು, ಸುಮಾರು 1.8 ಕೋಟಿ ರೂ.ಗಳನ್ನು ಪ್ರದರ್ಶನಕ್ಕೆ ವ್ಯಯಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ