ಬೆಂಗಳೂರು,ಜ.16- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಮರೇಗೌಡ ಬಯ್ಯಾಪುರ ಅವರು, ಕಾಂಗ್ರೇಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿದರು. ಈ ಬಾರಿಯ ಬಿಜೆಪಿಯ ಆಟ ಫೇಲ್ ಆಗಲಿದೆ.ಕಾಂಗ್ರೆಸ್ನ ಒಬ್ಬರು ಶಾಸಕರು ಹೋಗಿಲ್ಲ. ಇದನ್ನೇ ಹತ್ತಾರು ಬಾರಿ ಹೇಳಿದ್ದೇನೆ ಎಂದು ಹೇಳಿದರು.
ನಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾನು ಶ್ರಮಿಸುತ್ತಿದ್ದೇನೆ. ಮುಖ್ಯಮಂತ್ರಿಗಳು ಕರೆದಿರಲಿಲ್ಲ. ಆದರೆ ಕ್ಷೇತ್ರದ ಅನುದಾನದ ವಿಚಾರವಾಗಿ ಅವರನ್ನು ಭೇಟಿಯಾಗಿದ್ದೆ ಎಂದು ಸ್ಪಷ್ಟಪಡಿಸಿದರು.
ಬಾಂಬೆಗೆ ರಾಜಕೀಯ ಉದ್ದೇಶಕ್ಕಾಗಿ ಹೋಗಿರಲಿಲ್ಲ. ಸಾಯಿಬಾಬಾ ದರ್ಶನಕ್ಕೆ ತೆರಳಿದ್ದವು.ದೆಹಲಿ, ಬಾಂಬೆ, ಹರಿಯಾಣ ಎಲ್ಲಿಗಾದರೂ ಹೋಗಬಹುದು. ಆದರೆ ಇದರ ಚರ್ಚೆ ಅನಗತ್ಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದೇ 18ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.ಅಲ್ಲೇ ಎಲ್ಲವನ್ನೂ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.