ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಯಾವುದೇ ಮಾತುಕತೆ ನಡೆದಿಲ್ಲ ಎಂದು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ(ಡಿಪಿಸಿಸಿ) ನೂತನ ಅಧ್ಯಕ್ಷೆ ಶೀಲಾ ದೀಕ್ಷಿತ್ ಹೇಳಿದ್ದಾರೆ.
ಡಿಪಿಸಿಸಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೀಲಾ ದೀಕ್ಷಿತ್ ಅವರು, ರಾಜಕೀಯ ಸಂಪೂರ್ಣ ಸವಾಲುಗಳಿಂದ ಕೂಡಿದೆ. ಅದಕ್ಕೆ ತಕ್ಕಂತೆ ನಾವು ತಂತ್ರಗಳನ್ನು ಹೆಣೆಯುತ್ತೇವೆ. ಬಿಜೆಪಿ ಹಾಗೂ ಎಎಪಿ ಎರಡೂ ಸವಾಲುಗಳೇ. ಆ ಎಲ್ಲಾ ಸವಾಲುಗಳನ್ನು ಎದುರಿಸುತ್ತೇವೆ. ಆದರೆ ಆಪ್ ಜತೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ ಎಂದು ತಿಳಿಸಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎಎಪಿ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಮಾತು ಕೇಳಿಬಂದಿತ್ತು.
Nothing yet, says new Delhi Congress chief Sheila Dikshit on AAP alliance