ಹಾಸನ, ಜ.16- ನಮ್ಮದು ಯುಗಾದಿ ಪಂಚಾಂಗ. ಬಿಜೆಪಿಯವರು ಸಂಕ್ರಾಂತಿ ಪಂಚಾಗ. ನಮ್ಮ ಹೊಸ ಪಂಚಾಂಗ ನೋಡಿ ಹೇಳುತ್ತೇನೆ ಎಂದು ಆಪರೇಷನ್ ಕಮಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯಲ್ಲಿ ಆರೋಗ್ಯ, ಉದ್ಯೋಗ, ಕೃಷಿ ಮೇಳ ಸೇರಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಮಧ್ಯೆ ಆಪರೇಷನ್ ಕಮಲದ ಬಗ್ಗೆ ಮಾತನಾಡಲು ಅವರು ನಿರಾಕರಿಸಿದರು.
ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಏನೂ ಗೊತ್ತಿಲ್ಲ ಎಂದು ಮುಗುಳ್ನಕ್ಕರು. ನಾವು ಆರಾಮವಾಗಿದ್ದೇವೆ. ಆತಂಕ ಪಡುವ ಅಗತ್ಯವಿಲ್ಲ ಎಂದರು. ಶಾಸಕರಾದ ಎ.ಟಿ.ರಾಮಸ್ವಾಮಿ, ಶಿವಲಿಂಗೇಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.