ಜ.19ರಂದು ಸಹಕಾರ ನಗರದಲ್ಲಿ ಉದ್ಯೋಗ ಮೇಳ

ಬೆಂಗಳೂರು, ಜ.17-ನಿರುದ್ಯೋಗಿ ಯುವಜನರಿಗೆ ಸೂಕ್ತ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಜ.19 ರಂದು ಬೆಂಗಳೂರಿನ ಸಹಕಾರ ನಗರದಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೆರೇಗೌಡ ತಿಳಿಸಿದ್ದಾರೆ.
ಸಹಕಾರ ನಗರದ ದೇವ್ ಇನ್ ಶಾಲೆ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ವೋಲ್ವೋ, ಐಟಿಸಿ, ವಿಪೆÇ್ರೀ ಎಂಜಿನಿಯರಿಂಗ್, ಟಾಟಾ ಮೋಟಾರ್ಸ್, ಟಿವಿಎಸ್, ಆಕ್ಸಿಸ್ ಬ್ಯಾಂಕ್, ಆದಿತ್ಯ ಬಿರ್ಲಾ, ಎಲ್‍ಜಿ ಎಲೆಕ್ಟ್ರಾನಿಕ್ಸ್ ಸೇರಿದಂತೆ 60ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಡಿಪೆÇ್ರೀ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆ ಪಡೆದವರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಉದ್ಯೋಗ ಮತ್ತು ತರಬೇತಿ ಸಂಸ್ಥೆ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಉದ್ಯೋಗಾಕಾಂಕ್ಷಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ